
ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಂಜಲಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕಾ ಕೇಂದ್ರಕ್ಕೆ ದಾಳಿ ನಡೆಸಿದ ವೇಣೂರು ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಪತ್ತೆ ಹಚ್ಚಿದ್ದು ಶೇಖರಿಸಿಡಲಾಗಿದ್ದ ಕಲ್ಲನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ ನಿವಾಸಿ ರಮೇಶ್ ಬೋವಿ ಎಂಬಾತನು ಇಲ್ಲಿನ
ಪಂಜಲಗುಡ್ಡೆ ಎಂಬಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿ ಹಿನ್ನಲೆಯಲ್ಲಿ ವೇಣೂರು ಪೊಲೀಸರು ಜು31ರಂದು ಇಲ್ಲಿಗೆ ತೆರಳಿ ಪರಿಶೀಲನೆ ನಡೆಸಿದಾಗ ಇಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವುದು ಕಂಡುಬಂದಿದೆ. ಸ್ಥಳದಲ್ಲಿ ರಮೇಶ್ ಬೋವಿ ಎಂಬಾತನು ಗುಡ್ಡೆ ಜಮೀನಿನಲ್ಲಿ ಯಾವುದೋ ಸ್ಪೋಟಕ ವಸ್ತುವನ್ನು ಉಪಯೋಗಿಸಿ ಕಪ್ಪು ಕಲ್ಲು ಗಣಿಗಾರಿಕೆಯನ್ನು ಮಾಡಿದ್ದು ಸ್ಥಳದಲ್ಲಿ ಸುಮಾರು 4-5 ಲೋಡ್ ಕಪ್ಪು ಕಲ್ಲುಗಳಿರುವುದು ಕಂಡು ಬಂದಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ 66-2025 ಕಲಂ 9(B) Explosive Act -1884 . ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.