
ಬೆಳ್ತಂಗಡಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ಧಕ್ಕೆಯಾಗುವ ವಿಭಿನ್ನ ಕೊಮುಗಳ ನಡುವೆ ವೈಷಮ್ಯ ಸೃಷ್ಟಿಸುವ ಸಂದೇಶ ಹಾಕಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಜಿರೆ ನಿವಾಸಿ ಪುತ್ತುಮೋನು ಎಂಬವರು ಈ ಬಗ್ಗೆ ದೂರು ನೀಡಿದ್ದು ಫೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ ಅಯಿಶು ಅಯುಶಾ (AyshuAysha) ಎಂಬ ಖಾತೆಯಿಂದ ವಿಭಿನ್ನ ಕೋಮುಗಳ ನಡುವೆ ವೈಶಮ್ಯ ಉಂಟುಮಾಡುವ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿದ್ದ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.