
ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಮೃತದೇಹವನ್ನು ಹೂತು ಹಕಿರುವುದನ್ನು ತಾನು ನೋಡಿದ್ದೇನೆ ಎಂದು ಶನಿವಾರ ಎಸ್.ಐ.ಟಿ ಕಚೇರಿಗೆ ದೂರು ನೀಡಲು ಬಂದಿದ್ದ ವೇಳೆ ಹೇಳಿಕೆ ನೀಡಿದ್ದ ಜಯಂತ್ ಟಿ ಇದೀಗ ಈ ಬಗ್ಗೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ. ಇದದಾ ಬಳಿಕ ಇಂದು ಎಸ್.ಐ.ಟಿ ಕಚೇರಿಗೆ ಬಂದಿದ್ದರು. ಅವರನ್ನು ಈ ಪ್ರಕರಣದ ಬಗ್ಗೆ ದೂರನ್ನು ಧರ್ಮಸ್ಥಳ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದು ಅದರಂತೆ ಜಯಂತ್ .ಟಿ ಅವರು ಧರ್ಮಸ್ಥಳ ಠಾಣೆಗೆ ತೆರಳಿ ದೂರನ್ನು ನೀಡಿದ್ದಾರೆ. ಈ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ 200/DPS/2025 ರಂತೆ ದೂರನ್ನು ಸ್ವೀಕರಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಳ್ಳುವುದಾಗಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ