Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್...

ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
4

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

SIT ಗೆ ಹಸ್ತಾಂತರ: ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here