


ಬೆಳ್ತಂಗಡಿ: ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ನಡೆದ ಘಟನೆಗಳಿಗರ ಸಂಭಧಿಸಿದಂತೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ.
ಧರ್ಮಸ್ಥಳ ಪಾಂಗಳ ರಸ್ತೆಯಲ್ಲಿ ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಿಸಲಾಗಿದೆ
ಅದೇರೀತಿ ಪಾಂಗಳ ರಸ್ತೆಯ ರಸ್ತೆಯ ಬಳಿ ಅಕ್ರಮ ಗುಂಪು ಸೇರಿ ಎರಡು ವಾಹನಗಳನ್ನು ಜಖಂಗೊಳಿಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎರಡನೆಯ ಪ್ರಕರಣವನ್ನು ದಾಖಲಿಸಲಾಗಿದೆ. ಈ ಎರಡೂ ಪ್ರಕರಣಗಳಲ್ಲಿ ಪೊಲೀಸರು ವೀಡಿಯೋ ದಾಖಲೆಗಳನ್ನು ಮುಂದಿಟ್ಟುಕೊಂಡು ಆರೋಪಿಗಳನ್ನು ಗುರುತಿಸುವ ಕಾರ್ಯ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಹಲ್ಲೆ ಘಟನೆಯ ಮೊದಲು ನಡೆದ ವಾಗ್ವಾದದ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ವಾಹನಗಳನ್ನು ಜಖಂಗೊಳಿಸಿದ ಘಟನೆ ನಡೆದ ವೇಳೆ ಪೊಲೀಸರು ಸ್ಥಳದಲ್ಲಿದ್ದು ಇಡೀ ಘಾನೆಯ ವೀಡಿಯೋ ಚಿತ್ರೀಕರಣವನ್ನು ಪೊಲೀಸರು ನಡೆಸಿದ್ದು ಇದನ್ನು ಪೂರ್ಣವಾಗಿ ಪರಿಶೀಲಿಸುವ ಕಾರ್ಯ ನಡೆಯುತ್ತಿದೆ.
ಈ ಎರಡೂ ಪ್ರಕರಣಗಳನ್ನು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ಕಾರ್ಯ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಮತ್ತೊಂದೆಡೆ ಉಜಿರೆ ಖಾಸಗಿ ಆಸ್ಪತ್ರೆಯ ಸಮೀಪ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ನಡೆಸಿದ ಬಗ್ಗೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಮರೋಡಿ ಸೇರಿದಂತೆ ನಾಲ್ವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಚಾನೆಲ್ ವಿರುದ್ದ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಚಾನೆಲ್ ವಿರುದ್ದವೂ ಪ್ರಕರಣ ದಾಖಲಿಸಲಾಗಿರುವುದಾಗಿ ತಿಳಿದು ಬಂದಿದೆ.
