Home ಅಪರಾಧ ಲೋಕ ಬೆಳ್ತಂಗಡಿ : ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ ಪ್ರಕರಣ: ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

ಬೆಳ್ತಂಗಡಿ : ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ ಪ್ರಕರಣ: ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ವರದಿ ಮಾಡುತ್ತಿದ್ದ ವೇಳೆ  ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.

ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 189(2),191(2),115(2),324(5),352,307 ಜೊತೆಗೆ 190 BNS ಅಡಿಯಲ್ಲಿ ಸುಮಾರು 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗುರುತಿಸಿದ ಪೊಲೀಸರು  ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯ(48) ನನ್ನು  ಆ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿದ್ದಾರೆ. ಆರೋಪಿಯನ್ನು  ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version