Home ಅಪರಾಧ ಲೋಕ ಧರ್ಮಸ್ಥಳ; ಪಾಂಗಳದಲ್ಲಿ ಗುಂಪು ಘರ್ಷಣೆ ಆರು ಮಂದಿಯ ಬಂಧನ

ಧರ್ಮಸ್ಥಳ; ಪಾಂಗಳದಲ್ಲಿ ಗುಂಪು ಘರ್ಷಣೆ ಆರು ಮಂದಿಯ ಬಂಧನ

0
2

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಬಳಕಿ ಪಾಂಗಳ ಕ್ರಾಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿದ್ದು ಶ‌ನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಧೀಶರು ಆದೇಶಿಸಿದ್ದಾರೆ.
ಎರಡು ಗುಂಪುಗಳು ಅಕ್ರಮ ಕೂಟ ಸೇರಿ ಗಲಾಟೆ ಮಾಡಿದ್ದು ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ(BNS), 2023
(Us-189(2),191(2),132,324(6),190) ಅಡಿಯಲ್ಲಿ ಆ.6 ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

NO COMMENTS

LEAVE A REPLY

Please enter your comment!
Please enter your name here