




ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮೆರವಣಿಗೆಯಲ್ಲಿ ಪಾಲ್ಗೊಂಡು ಮೂರು ಮಾರ್ಗ ಸ್ಮಾರಕದ ಬಳಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಸಲ್ಲಿಸಿದರು, ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಮಂಡಲ,ಮಹಾಶಕ್ತಿ ಕೇಂದ್ರ, ಬೂತ್ ಸಮಿತಿ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕಾರಿಣಿ ಸದಸ್ಯರು,ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
