




ಬೆಳ್ತಂಗಡಿ : ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮಸೀದಿ ಖತೀಬರಾದ ಹನೀಫ್ ಫೈಝಿಯವರು ದುವಾ ನೆರವೇರಿಸಿದರು. ಅತಿಥಿಗಳಾಗಿ ಉಪಾಧ್ಯಕ್ಷರಾದ ಬಿ.ಶೇಖುಂಞ್ಞ, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಕಾರ್ಯದರ್ಶಿಗಳಾದ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಫೈಝಲ್ ಐ.ಜೆ, ಜಮಾತ್ ಬಾಂಧವರು ಹಾಗೂ ಮದರಸ ಮಕ್ಕಳು ಉಪಸ್ಥಿತರಿದ್ದರು. ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

