


ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಯನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದೆ ತಪ್ಪಿಸಿಕೊಂಡ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ರೂ ಠಾಣೆಗೆ ವಿಚಾರಣೆಗೆ ಹಾಜರಾಗದ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜೊತೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಂದ್.ಎಮ್ ನೇತೃತ್ವದ ತಂಡ ಬೆಂಗಳೂರಿನ ಬನ್ನೆರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಗೆ ತರಳಿ ಆತನನ್ನು ಬಂದಿಸುವ ಪ್ರಯತ್ನ ನಡೆಸಿರುವುದಾಗಿ ತಿಳಿದು ಬಂದಿದೆ ಆದರೆ ಈ ವೇಳೆ ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದ್ದು ಪೊಲೀಸ್ ತಂಡ ಬೆಂಗಳೂರಿನಲ್ಲಿಯೇ ಇದ್ದು ಹುಡುಕಾಟ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
