Home ಸ್ಥಳೀಯ ಸಮಾಚಾರ ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಸಿ.ಇ.ಟಿ, ನೀಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಸಿ.ಇ.ಟಿ, ನೀಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

14
0

ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಸಿಇಟಿ,‌ನೀಟ್, ಜೆಇ,ಹಾಗೂಅಬ್ಕಾಸ್ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಿ ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಆರಂಭದಿಂದಲೇ ಸಿದ್ದಗೊಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮಗಳಿಗೆ ಹೆಚ್ಚು ಮಹತ್ವವಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ದೇಶೀಯ ಕೇಂದ್ರೀಯ ವಿದ್ಯಾಲಯದ ಪ್ರಾಂಶಯಪಾಲರಾದ ನವೀನ್ ಪ್ರಕಾಶ್ ಆಗಮಿಸಿ ಶುಭ ಹಾರೈಸಿದರು.
ಕ್ರೈಸ್ಟ್ ಅಕಾಡೆಮಿ ಮುಂಡಾಜೆ ಇದರ ಪ್ರಾಂಶುಪಾಲರಾದ ಫಾ. ಜಾರ್ಜ್ ಸಿ.ಎಂ.ಐ ಫಾ. ಅಬ್ರಹಾಂ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಗೌಡ, ಪಿ.ಸಿ ಸೆಬಾಸ್ಟಿಯನ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here