


ಬೆಳ್ತಂಗಡಿ; ಖಾಸಗಿ ಬಸ್ ಡಿಕ್ಕಿಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಸಂಭವಿಸಿದೆ.
ಮೃತ ಮಹಿಳೆ ಸುನಂದ ಲತಾ (55) ಎಂಬವರಾಗಿದ್ದಾರೆ.
ಈಕೆ ಆ 26 ರಂದು ಬೆಳಗ್ಗೆ ಪಣಕಜೆ ಎಂಬಲ್ಲಿ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದ ತುಳುನಾಡು ಬಸ್ ಅನ್ನು ಅದರ ಚಾಲಕ ಅಜಾಗರೂಕತೆ ಹಾಗಿ ನುರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದದ್ದು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರನ್ನು ಕೂಡಲೇ ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆವೇಳೆಗೆ ಆಕೆ ಮೃತಪಟ್ಟಿದ್ದಳು. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಬಸ್ ಚಾಲಕ ಮಹಮ್ಮದ್ ಶರೀಫ್ ಎಂಬಾತನ ವಿರುದ್ದ ಕಲಂ 281, 106 ಬಿ.ಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ.
