
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಆಗಮಿಸಿದ್ದುಅಧಿಕಾರಿಗಳ ಸೂಚನೆಯ ಮೇರೆಗೆ ಹಿಂತಿರುಗಿದ್ದಾರೆ
ಗುರುವಾರ ಮಧ್ಯಾಹ್ನದ ವೇಳೆಗೆ ಎರಡು ವಾಹನಗಳಲ್ಲಿ ಸೌಜನ್ಯ ಮನೆಯವರು ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದರು. ಆದರೆ ಇವರು ಮುಂಚಿತವಾಗಿ ಅನುಮತಿ ಪಡೆಯದೆ ಆಗಮಿಸಿದ ಹಿನ್ನಲೆಯಲ್ಲಿ ಇವರನ್ನು ಪೊಲೀಸರು ಹಿಂದಕ್ಕೆ ಕಳುಹಿಸಿದ್ದಾರೆ. ಇಂದು ಎಸ್.ಐ.ಟಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಇರಲಿಲ್ಲ ಎನ್ನಲಾಗಿದೆ.
ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈಬಗ್ಗೆ ತನಿಖೆ ನಡೆಸುವಂತೆ ಮನವಿ ನೀಡುವ ಉದ್ದೇಶದಿಂದಾಗಿ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಇತರರು ಎಸ್.ಐ.ಟಿ ಕಚೇರಿಗೆ ಬಂದಿರುವುದಾಗಿ ತಿಳಿದು ಬಂದಿದೆ.