



ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಧರ್ಮಸ್ಥಳ ನಿವಾಸಿ ಪ್ರಭಾಕರ್ ಗೌಡ ಆ.13 ರಂದು ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ರಾತ್ರಿ 9:30 ಕ್ಕೆ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಬೆಳ್ತಂಗಡಿ ಪೊಲೀಸರು ಬೆಂಗಳೂರಿಗೆ ತೆರಳಿ ಕಾರಿನಲ್ಲಿ ಆ.29 ರಂದು ಮಧ್ಯಾಹ್ನ 1:45 ಕ್ಕೆ ಹಾಜರಾಗಿದ್ದರು. ವಾಪಸ್ ಹೋಗುವಾಗ ಯಾವ ಭದ್ರತೆ ಬೇಡವೆಂದು ಪೊಲೀಸರಿಗೆ ಹೇಳಿ ತಮ್ಮ ಖಾಸಗಿ ಭದ್ರತಾ ಸಿಬ್ಬಂದಿಗಳ ಜೊತೆ ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ.












