Home ಅಪರಾಧ ಲೋಕ ಗಿರೀಶ್ ಮಟ್ಟಣ್ಣನವರ್ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಮತ್ತುಂದು ಪ್ರಕರಣ ದಾಖಲು

ಗಿರೀಶ್ ಮಟ್ಟಣ್ಣನವರ್ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಮತ್ತುಂದು ಪ್ರಕರಣ ದಾಖಲು

0

ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು
ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವ‌ರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಭಾನುವಾರ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಟ್ಟಣ್ಣವ‌ರ್ ಮತ್ತು ತಿಮರೋಡಿ ಸಮಾಜದ ಸೌಹಾರ್ದಮಯ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ದೂರು ನೀಡಿದ್ದಾರೆ. ಆ.30ರಂದು ಯುಟ್ಯೂಬ್‌ನಲ್ಲಿ ಕಂಡ ವಿಡಿಯೊವೊಂದರಲ್ಲಿ ಮದನ್ ಬುಗುಡಿ ಎಂಬ ವ್ಯಕ್ತಿಯ ಜತೆಗೂಡಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸಮಾಜದ ಸ್ವಾಸ್ಥ್ಯ ಕದಡುವ ಮಾತುಗಳನ್ನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮಟ್ಟಣ್ಣವ‌ರ್ ಮತ್ತು ತಿಮರೋಡಿ ಸೌಹಾರ್ದ ಕೆಡಿಸುವ ಮತ್ತು ಭಾವನೆಗಳಿಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರವೀಣ್ ಕೆ.ಆ‌ರ್ ದೂರಿನಲ್ಲಿ ತಿಳಿಸಿದ್ದಾರೆ. ಮದನ್ ಬುಗಡಿ ಎಂಬಾತನನ್ನು ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಸುಳ್ಳು ಮಾಹಿತಿಯನ್ನು ಮಾಧ್ಯಮಗಳ ಮುಂದೆ ಪ್ರಕಟಿಸಿ ಸಮಾಜವನ್ನು ವಂಚಿಸಿ ಮಾನವ ಹಕ್ಕು ಆಯೋಗದ ಪ್ರಾಮಾಣಿಕತೆಗೆ ಕಳಂಕವನ್ನು ತರಲು ಯತ್ನಿಸಿದ್ದಾರೆ ಕೆಲವು ದಿನಗಳಿಂದ ಇಬ್ಬರೂ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಂಚು ಹೂಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಭಾರತೀಯ ನ್ಯಾಯಸಂಹಿತೆಯ ಕಲಂ 204, 319(2), 353(2), ಮತ್ತು 3(5) ಪ್ರಕಾರ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಮದನ್ ಬುಗಡಿ ಅವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕ್ರಣ ದಾಖಲಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version