
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ರಸ್ತೆಯ ಉಜಿರೆಯಲ್ಲಿ ಬುಧವಾರ ನಡೆದ ಲಾರಿ-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಯಾನೆ ಬಾಲು (44), ಗುರುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬುಧವಾರ ಸಂಜೆ ಉಜಿರೆ ಸಮೀಪ ಅವರು ಚಲಾಯಿಸುತ್ತಿದ್ದ ಬೈಕಿಗೆ ಲಾರಿ ಡಿಕ್ಕಿ ಹೊಡೆದಿತ್ತು.ಇದರಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಗಾರೆ ಕಾರ್ಮಿಕರಾಗಿದ್ದ
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.