Home ಸ್ಥಳೀಯ ಸಮಾಚಾರ ಸಿಯೋನ್ ಆಶ್ರಮ: ಓಣಂ ಹಬ್ಬ ಆಚರಣೆ

ಸಿಯೋನ್ ಆಶ್ರಮ: ಓಣಂ ಹಬ್ಬ ಆಚರಣೆ

0

ಬೆಳ್ತಂಗಡಿ; ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ದಿನಾಂಕ:05.09.2025ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು ಪುಣಾಣಿಗಳೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ. ಪೌಲೋಸ್ ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಹಬ್ಬಕ್ಕೆ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಹಿತೈಷಿಗಳು, ಸಿಬ್ಬಂದಿವರ್ಗದವರು ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಾಂತ್ವನಂ ಕುವೈಟ್ ಇವರ ವತಿಯಿಂದ ಓಣಂ ಊಟದ ವ್ಯವಸ್ಥೆ ಮಾಡಲಾಗಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version