
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನನ್ನು
ಆ23 ರಂದು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು ಆಭದಲ್ಲಿ ಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು. ಶನಿವಾರ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಂಧನ ವಿಧಿಸಿದೆ.