Home ಅಪರಾಧ ಲೋಕ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ಪೊಲೀಸರಿಗೆ ದೂರು

ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ಪೊಲೀಸರಿಗೆ ದೂರು

0

ಬೆಳ್ತಂಗಡಿ; 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನಿಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ದೂರು ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ ಆದ್ದರಿಂದ ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಬೆಳ್ತಂಗಡಿ ಪೊಲೀಸರು ದೂರನ್ನು ಸ್ವೀಕರಿಸಿದ್ದು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version