
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ14 ಭಾನುವಾರ ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು. ಮಳೆಗಾಲದಲ್ಲಿ
ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನಗಳ ಸಂಚಾರವೇ ಅಸಾಧ್ಯವಾಗುವ ಸ್ಥಿತಿ ನಿರ್ಮಾಣವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ