


ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್.ಐ.ಟಿ ಕಾರ್ಯಾಚರಣೆ ವೇಳೆ ಒಂಬತ್ತು ಸ್ಥಳಗಳಲ್ಲಿ ಮಾನವನ ಮೂಳೆಗಳ ಅವಶೇಷಗಳು ಪತ್ತೆಯಾಗಿರುವುದಾಗಿ ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗುತ್ತಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಎಸ್.ಐ.ಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ಮಾನವನ ಅವಶೇಷಗಳು ಪತ್ತೆಯಾಗಿದ್ದು ಅದನ್ನು ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ ಎಂದು ತಿಳೊದು ಬಂದಿದೆ.
