ಬೆಳ್ತಂಗಡಿ: ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಗೂಡಂಗಡಿಯ ಮಾಲಕನೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ.
ಪುತ್ತುಮೋನು(55) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ ಈತ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದ ಎನ್ನಲಾಗಿದ್ದು ದೌರ್ಜನ್ಯ ಕ್ಕೆ ಈಡಾದ ಬಾಲಕನ ಮನೆಯವರು ದೂರು ನೀಡಿದ್ದು ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಸೆ.19ರಂದು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿಯೊಬ್ಬ ಅದನ್ನು ಸಾಮಾಜಿಕ ಜಲಾತಾಣದಲ್ಲಿ ಹಾಕಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಆತನ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿರುವುದಾಗಿ ತಿಳಿದುಬಂದಿದೆ.
