ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ಎನ್.ಸಿ ರೋಡ್ ಸಮೀಪ ಸ್ಕೂಟರ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.19ರಂದು ಸಂಜೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕಟ್ಟೆ ಮನೆ ರಾಜೇಶ್ (36) ಎಂದು ಗುರುತಿಸಲಾಗಿದೆ.
ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ ಸಿ ಬಸ್ಸಿಗೆ ವಗ್ಗ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳು ವನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
