
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯನ ಬಂಧನದ ಬಳಿಕ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿದ್ದು. ಈ ಪ್ರಕರಣದ ಬಗ್ಗೆ ತನಿಖೆಗೆ ಸೆ21ರಂದು ಹಾಜರಾಗುವಂತೆ ಮಹೇಶ್ ಶೆಟ್ಟಿ ಅವರಿಗೆ ನೊಟೀಸ್ ನೀಡಲಾಗಿತ್ತು. ಇಂದು ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಬೆಳ್ತಂಗಡಿ ಪೊಲೀಸರು ಸೆ.19 ರಂದು ಬೆಳಗ್ಗೆ 6 ಗಂಟೆಗೆ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ತೆರಳಿದಾಗ ಅವರು ಮನೆಯಲ್ಲಿರಲಿಲ್ಲ ಈ ಹಿನ್ನಲೆಯಲ್ಲಿ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದರು .
ಪೊಲೀಸರ ನೊಟೀಸ್ ನಂತೆ ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಚಾರಣೆಗೆ ಹಾಜರಾಗುವರೇ ಎಂಬುದು ಕುತೂಹಲದ ವಿಚಾರವಾಗಿದೆ.
ಒಂದು ವೇಳೆ ಠಾಣೆಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಮತ್ತೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಿ ರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ತಿಮರೋಡಿ ಮಹೇಶ್ ಶೆಟ್ಟಿ ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಎಸ್.ಐ.ಟಿ ಎಸ್ಪಿ.ಸಿ.ಎ.ಸೈಮನ್ ನೀಡಿದ ದೂರಿನ ಮೇರೆಗೆ ARMS ACT 1959(U/S-25(1),25(1-A),24(1-B)(a)) ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು.