Home ರಾಜಕೀಯ ಸಮಾಚಾರ ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

0

ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ ಅಧ್ಯಕ್ಷರಾಗಿ ನೇಮಕಗೊಳ್ಳಲಿರುವುದಾಗಿ ತಿಳಿದು ಬಂದಿದೆ.
ಕಾಂಗ್ರೆಸ್ ಹೈಕಮಾಂಡ್ 39ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರುಗಳ
ಈ ಪಟ್ಟಿಯನ್ನು ಅಂತಿಮಗೊಳಿಸಿದ್ದು ಈ ಪಟ್ಟಿ ಇದೀಗ ರಾಜ್ಯದ ಮುಖ್ಯಮಂತ್ರಿ ಉಪಮುಖ್ಯ ಮಂತ್ರಿಗಳ ಕೈ ಸೇರಿದ್ದು ರಾಜ್ಯ ಸರಕಾರದಿಂದ ಕೆಲವೇ ದಿನಗಳಲ್ಲಿ ಈ ಬಗ್ಗೆ ಅಂತಿಮ ಘೋಷಣೆ ಹೊರಡಿಸುವ ಸಾಧ್ಯತೆಯಿದೆ.

ಅದೇರೀತಿ ಮಂಗಳೂರಿನ ಶಾಲೆಟ್ ಪಿಂಟೋ ಅವರು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಹಾಗೂ ಲಾವಣ್ಯಾ ಬಲ್ಲಾಳ್ ಅವರು ಕರ್ನಾಟಕ ಸ್ಟೇಟ್ ಸೀಡ್ ಆಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜನ್ಸಿಯ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version