


ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿದ ಘಟನೆ ಗುರುವಾರ (ಸೆ.25) ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
