
ಬೆಳ್ತಂಗಡಿ; ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸತತ
6ನೇ ಬಾರಿಗೆ ಶ್ರೀಧರ ಜಿ.ಭಿಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ
ಅನಂತ ಭಟ್ ಮಚ್ಚಿಮಲೆ ಅವರು ಎರಡನೆ ಬಾರಿಗೆ
ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಸೆ.26ರಂದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಸಂಘದ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನಿರ್ದೇಶಕರುಗಳು ಭಾಗಿಗಳಾದರು