Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಪ್ರಕರಣ; ಗಡಿಪಾರು ವಿರುದ್ಧ ಪ್ರತಿಭಟನೆಗೆ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಪ್ರಕರಣ; ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

0

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.25 ಬೆಳ್ತಂಗಡಿ ತಹಶೀಲ್ದಾರ್ ಗೆ ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಬೆಳ್ತಂಗಡಿ ಪೊಲೀಸರು ಪ್ರತಿಭಟನೆ ಅರ್ಜಿ ಪರಿಶೀಲನೆ ಮಾಡಿ ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಆಗುವ ಸಂಭವ ಇರುವುದಾಗಿ ತಿಳಿಸಿ ಅನುಮತಿ ನೀಡದಂತೆ ಅಭಿಪ್ರಾಯ ನೀಡಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version