Home ಅಪರಾಧ ಲೋಕ ನೆರಿಯ ಪೆಟ್ರೋಲ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ...

ನೆರಿಯ ಪೆಟ್ರೋಲ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್‌ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ  ತಮ್ಮಯ್ಯ(35) ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಸೆ.28 ರಂದು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಉಮೇಶ್ ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬಿದ್ರೆ ನಿವಾಸಿ ಎಂದು ತಿಳಿಸಿದ್ದು ಅದರಂತೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದಾಗ ವಾರಂಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತಮ್ಮಯ್ಯ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಉಪ ನೀರಿಕ್ಷಕರು ಸಮರ್ಥ್ ಆರ್ ಗಾಣಿಗೇರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವ್ರಷಭ , ಚರಣ್ ರಾಜ್, ಗೋವಿಂದರಾಜ್, ಜಗದೀಶ್ ರವರು ಬಂಧಿಸಿ ಸೆ.29 ರಂದು  ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version