Home ಅಪಘಾತ ಉಚ್ಚಿಲದಲ್ಲಿ ಅಪಘಾತ ಮಾಲಾಡಿ ನಿವಾಸಿ ಸ್ಥಳದಲ್ಲಿಯೇ ಸಾವು

ಉಚ್ಚಿಲದಲ್ಲಿ ಅಪಘಾತ ಮಾಲಾಡಿ ನಿವಾಸಿ ಸ್ಥಳದಲ್ಲಿಯೇ ಸಾವು

0

ಬೆಳ್ತಂಗಡಿ:ಉಚ್ಚಿಲದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಾಲಾಡಿ ಕೊಲ್ಪೆದ ಬೈಲು ನಿವಾಸಿ ರಮೇಶ್ ಹೆಗ್ಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ

ಮೃತ ಬೈಕ್‌ ಸವಾರನ ತಲೆ ಜಜ್ಜಿ ಹೋಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ನಿಲ್ಲಿಸದೆ ಪರಾರಿಯಾಗಿದೆ ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ, ಮೂಳೂರು ಅಂಬುಲೆನ್ಸ್ ನ ಹಮೀದ್, ರಝಾಕ್, ಅನ್ವ‌ರ್ ಕೋಟೇಶ್ವರ, ಸಾದಿಕ್ ಪಡುಬಿದ್ರೆ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಸ್ಥಳಕ್ಕೆ ಆಗಮಿಸಿರುವ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version