ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣವೇದಿಕೆಯ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶದಲ್ಲಿ ಹೈಕೋರ್ಟ್ ಅ8ರ ವರೆಗೆ ಬಲವಂತದ ಕ್ರಮ ಬೇಡ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ
ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಿಚಾರಣೆ ನಡೆದು ಅ. 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ನ್ಯಾಯಾಲಯವು ಸೂಚಿಸಿದ್ದು ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಅಲ್ಲದೆ ಪ್ರಕರಣದಲ್ಲಿ ಪ್ರತಿವಾದಿಗಳಿಗೆ ನ್ಯಾಯಾಲಯ ನೋಟೀಸ್ ಜಾರಿಮಾಡಿದೆ. ಸೆ.8ರಂದು ವಿಚಾರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ
