ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮಂಗಳವಾರ ಮತ್ತೆ ಆಗಮಿಸಿ ಇಲ್ಲಿನ ಅರಣ್ಯದಲ್ಲಿ ಪರಿಶೀಲನೆ ಆರಂಭಿಸಿದ್ದಾರೆ . ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD ಇಂಜಿನಿಯರ್ ಜೊತೆಯಲ್ಲಿ ಸೆ.30 ರಂದು ಸಂಜೆ 4 ಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇಲ್ಲಿ ಪರಿಶೀಲನೆ ನಡೆಸುವ ವೇಳೆ ಏಳು ಮೃತದೇಹಗಳು ಪತ್ತೆಯಾಗಿದ್ದವು ಈ ಹಿನ್ನಲೆಯಲ್ಲಿ ಸ್ಥಳದ ಮ್ಯಾಪ್ ತಯಾರಿಸುವ ಅಗತ್ಯವಿದ್ದ ಕಾರಣಕ್ಕೆ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳೊಂದಿಗೆ ಬಂದು ಮ್ಯಾಪ್ ತಯಾರಿಸಿ ಹಿಂತಿರುಗಿದ್ದಾರೆ
