
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಸೆ30ರಂದು ಮಂಗಳೂರಿನ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಹಾಗೂ ಸೆಕ್ಷನ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಲಾಗಿದೆ.
ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರಿ ವಕೀಲರು ಇಂದು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಿದರು.
ಇದಾದ ಬಳಿಕ ಮಹೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಸರಕಾರಿ ವಕೀಲರ ಪ್ರತಿವಾದ ಮಂಡನೆಯ ಕಾರ್ಯ ನಡೆಯಬೇಕಾಗಿದ್ದು ಅದಕ್ಕಾಗಿ ಅ.4ಕ್ಕೆ ವಿಚಾರಣೆಯ ದಿನ ಮೂಂದೂಡಿದ್ದಾರೆ.