Home ಅಪರಾಧ ಲೋಕ ಆತ್ಮ ನಿರ್ಭರ ಯೋಜನೆಗಳಲ್ಲಿ ಶ್ರೇಷ್ಠತೆ ತೋರಿದ ಉಜಿರೆ ಗ್ರಾಮ ಪಂಚಾಯತ್ ಗೆ ಬೆನಕ ಚಾರಿಟೇಬಲ್ ಟ್ರಸ್ಟ್...

ಆತ್ಮ ನಿರ್ಭರ ಯೋಜನೆಗಳಲ್ಲಿ ಶ್ರೇಷ್ಠತೆ ತೋರಿದ ಉಜಿರೆ ಗ್ರಾಮ ಪಂಚಾಯತ್ ಗೆ ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ, ಬೆನಕ ಹೆಲ್ತ್ ಸೆಂಟರ್ ವತಿಯಿಂದ ಸನ್ಮಾನ

18
0

ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ, ಬೆನಕ ಹೆಲ್ತ್ ಸೆಂಟರ್ – ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್, ಉಜಿರೆ
ವತಿಯಿಂದ ಆತ್ಮ ನಿರ್ಭರ ಯೋಜನೆಗಳಲ್ಲಿ ಶ್ರೇಷ್ಠತೆ ತೋರಿದ ಉಜಿರೆ ಗ್ರಾಮ ಪಂಚಾಯತ್ – ರಾಜ್ಯದ ನಂ.1 ಸ್ಥಾನ ಪಡೆದ ಹಿನ್ನಲೆಯಲ್ಲಿ ಹಾಗೂ ಮಹಾತ್ಮಾ ಗಾಂಧೀಜಿ ಜಯಂತಿ ಪ್ರಯುಕ್ತ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ  ಉಷಾ ಕಿರಣ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಪಿ.ಎಚ್. ಪ್ರಕಾಶ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕಾರ್ಯಕ್ರಮವನ್ನು ನೆರವೇರಿಸಿದರು.
ಸಹಾಯಕ ನಿರ್ದೇಶಕರಾದ ಡಾ. ಭಾರತಿ ಗೋಪಾಲಕೃಷ್ಣ ವಂದಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ  ಎಸ್. ಜಿ. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು, ಬೆನಕ ಆಸ್ಪತ್ರೆಯ ಪ್ರಧಾನ ವ್ಯವಸ್ಥಾಪಕರಾದ  ದೇವಸ್ಯ ವರ್ಗೀಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here