


ಬೆಳ್ತಂಗಡಿ; ಬದ್ಯಾರ್ ಸಮೀಪ ಕಾರುಗಳ ನಡುವೆ ಅ2ರಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳೆ ಕಡೆಗೇ ಹೋಗುತ್ತಿದ್ದ ಕಾರು ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರುಗಳು ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
