
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು
ಅ 9 ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ ಆದೇಶ ಬಂದಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.