Home ಅಪರಾಧ ಲೋಕ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

7
0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ವಿಚಾರಣೆಗಾಗಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.
ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಳನ್ನು ಪಡೆಯಲು ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹಾಗೂ ಇತರ ವಿಚಾರಗಳನ್ನು ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎನ್ನಲಾಗಿದೆ.
ಚಿನ್ನಯ್ಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿದ‌ವೇಳೆ ಆತನೊಂದಿಗೆ ಪತ್ನಿಯೂ ಇದ್ದಳು ಎಂದು ಸೌಜನ್ಯ ಪರ ಹೋರಾಟಗಾರರು ಹೇಳಿಕೆ ನೀಡಿದ್ದರು. ಅಲ್ಲಿ ಆತ ನೀಡಿದ ಹೇಳಿಕೆಗೆಯ ಬಗೆಗಿನ ವೀಡಿಯೋಗಳು ಬಹಿರಂಗವಾಹಿತ್ತು. ಇದಾದ ಬಳಿಕ ಚಿನ್ನಯ್ಯ ನ್ಯಾಯಾಲಯದಲ್ಲಿ ಹೊಸ ಹೇಳಿಕೆ ನೀಡಿದ್ದ ಈ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಚಿನ್ನಯ್ಯನ ಪತ್ನಿಯನ್ನು ಕರೆಸಲಾಗಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here