
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಮಹೇಶ್ ಶೆಟ್ಟಿ ಅವರ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಶೋಧ ನಡೆಸಿದ ವೇಳೆ ಅಲ್ಲಿ ಒಂದು ಬಂದೂಕು ಹಾಗೂ ಎರಡು ತಲವಾರುಗಳು ಪತ್ತೆಯಾಗಿರುವುದಾಗಿ ಎಸ್.ಐ.ಟಿ ಅಧಿಕಾರಿಗಳು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ಠಾಣೆಗೆ ಹಾಜರಾಗುವಂತೆ ಪೊಲೀಸರು ನೋಟೀಸ್ ನೀಡಿದ ಬೆನ್ನಲ್ಲಿಯೇ ಮಹೇಶ್ ಶೆಟ್ಟಿ ಅವರು ನಿರೀಕ್ಷಣಾ ಜಾಮೀನಿಗೆ ಮಂಗಳೂರಿನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.
ಇದೀಗ ಮಹೇಶ್ ಶೆಟ್ಟಿ ಅವರು ಅಕ್ರಮ ಶಸ್ತ್ರಾಸ್ತ್ರ ಕ್ಕೆ ಸಂಬಂಧಿಸಿದ ಎಫ್.ಐ.ಆರ್ ದೂರು ಹಾಗೂ ಮುಂದುವರಿದಿರುವ ಅಪರಾಧ ಕ್ರಮಗಳನ್ನು ರದ್ದುಪಡಿಸಲು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.