
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.