ಬೆಳ್ತಂಗಡಿ; ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ದ ತಮ್ಮ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ಜಾಗವನ್ನು ಜಪ್ತಿಮಾಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ 103/2025 ರಂತೆ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020, 112 (2), 303(2) ಬಿಎನ್‌ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಸ್ಥಳದಿಂದ ಹಲವಾರು ಜಾನುವಾರುಗಳ ತಲೆಗಳನ್ನು ವಶಪಡಿಸಲಾಗಿತ್ತು. ತನಿಖೆಯ ಸಮಯ ಆರೋಪಿಯು ಕೃತ್ಯಕ್ಕೆ ಬಳಸಿರುವ ಸ್ಥಳವಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬಳಿಯಿರುವ ಮಹಮ್ಮದ್ ರಫೀಕ್ ಅವರ ಮನೆಯಿದ್ದ ಪ್ರಸ್ತುತ ಖಾಲಿ ಜಾಗವನ್ನು ಕಲಂ 8 (1) ರ ಪ್ರಕಾರ ತನಿಖಾಧಿಕಾರಿಯವರು ಜಪ್ತಿ ಮಾಡಿ ಕೊಂಡು ಮುಟ್ಟುಗೋಲಿಗಾಗಿ ಉಪವಿಭಾಗಿ ದಂಡಾಧಿಕಾರಿ ಪುತ್ತೂರು ರವರಿಗೆ ವರದಿ ನೀಡಲಾಗಿದ್ದು ಅದರಂತೆ ಸ್ಥಳವನ್ನು ಇದೀಗ ಜಪ್ತಿ ಮಾಡಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ.
