Home ಕ್ರೀಡಾ ಸಮಾಚಾರ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ  ಎಸ್‌ಡಿಎಂ ಪಿಯು ಕಾಲೇಜು ಉಜಿರೆ ತಂಡಕ್ಕೆ ಚಾಂಪಿಯನ್ ಶಿಪ್ 

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ  ಎಸ್‌ಡಿಎಂ ಪಿಯು ಕಾಲೇಜು ಉಜಿರೆ ತಂಡಕ್ಕೆ ಚಾಂಪಿಯನ್ ಶಿಪ್ 

0
5

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ರಾಜ್ಯಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟವು ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಉಜಿರೆ ಎಸ್.ಡಿ.ಎಂ ಕಾಲೇಜು ತಂಡ ಚಪಿಯನ್ ಪಟ್ಟವನ್ನು ಪಡೆದು ಕೊಂಡಿದ್ದು ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದೆ.

ಅಂತಿಮ (ಫೈನಲ್) ಪಂದ್ಯದಲ್ಲಿ ವಿಜಯಪುರ ಜಿಲ್ಲೆಯ ತಂಡದ ವಿರುದ್ಧ 38–26 ಅಂಕಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ, 2025–26ನೇ ಸಾಲಿನ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕಬಡ್ಡಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ.

ಕಬಡ್ಡಿ ತಂಡದ ತರಬೇತುದಾರರಾಗಿ ಕೃಷ್ಣಾನಂದ ರಾವ್ ಮತ್ತು ವ್ಯವಸ್ಥಾಪಕರಾಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಕಾರ್ಯನಿರ್ವಹಿಸಿದ್ದಾರೆ.

ಈ ಗೆಲುವಿನೊಂದಿಗೆ ಕಾಲೇಜಿನ ತಂಡವು ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಗೌರವವನ್ನು ಪಡೆದುಕೊಂಡಿದೆ.

ವಿಜೇತ ತಂಡಕ್ಕೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ಕಾಲೇಜಿನ ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಗಳು ಹಾಗೂ ಬೋಧಕ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ ಶುಭಹಾರೈಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here