Home ಅಪರಾಧ ಲೋಕ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು ಬಂಧನ

1
0

ಬೆಳ್ತಂಗಡಿ; ಲಾರಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ತಂಡವನ್ನು ಬೆನ್ನಟ್ಟಿದ ಪೊಲೀಸರ ವಾಹನಕ್ಕೆ ಲಾರಿ ಡಿಕ್ಕಿಹೊಡೆಸಿ ಪರಾರಿಯಾಗಲು ಯತ್ನಿಸಿದ್ದ ಗೋಸಾಗಾಟಗಾರರ ಮೇಲೆ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರ ಮಂಗಲದಲ್ಲಿ ಬುಧವಾರ ಬೆಳಗ್ಗೆ ನಡದಿದೆ. ಆರೋಪಿ ಅಬ್ದುಲ್ಲಾ (40 ವರ್ಷ) ಎಂಬಾತನಾಗಿದ್ದಾನೆ.
ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.
ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here