Home ಸ್ಥಳೀಯ ಸಮಾಚಾರ ಧರ್ಮಸ್ಥಳ; ಅ24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಧರ್ಮಸ್ಥಳ; ಅ24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ

24
0

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅ. 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.

ಸಭಾಕಾರ್ಯಕ್ರಮ:
ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.
ಶಾಸಕರುಗಳಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು.
ಹಿರಿಯ ನೌಕರರ ಸನ್ಮಾನ ಹಾಗೂ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸುವರು.
ಹಬ್ಬದ ವಾತಾವರಣ: ದೀಪಾವಳಿ ಹಬ್ಬದ ಜೊತೆಗೆ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಅಂಗವಾಗಿ ಎಲ್ಲೆಲ್ಲೂ ಸಂಭ್ರಮ- ಸಡಗರದ ವಾತಾವರಣವಿದೆ.
ಬಸದಿ, ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ) ಅನ್ನಪೂರ್ಣ ಹಾಗೂ ವಸತಿಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳು ಮತ್ತು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಿದ್ದು, ಕಣ್ಮನ ಸೆಳೆಯುತ್ತಿವೆ.

LEAVE A REPLY

Please enter your comment!
Please enter your name here