ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೆ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಶುಕ್ರವಾರ ಕಂಚಿಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.
ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು.
ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು.
ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.
ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು









