Home ಅಪರಾಧ ಲೋಕ ಸುರತ್ಕಲ್ ಚೂರಿ ಇರಿತ‌ ಪ್ರಕರಣ‌ ನಾಲ್ವರು ಆರೋಪಿಗಳ ಬಂಧನ

ಸುರತ್ಕಲ್ ಚೂರಿ ಇರಿತ‌ ಪ್ರಕರಣ‌ ನಾಲ್ವರು ಆರೋಪಿಗಳ ಬಂಧನ

0

ಮಂಗಳೂರ; ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಲೆಕ್ಸ್ ಸಂತೋಷ್, ನಿತಿನ್, ಸುಶಾಂತ್ ಮತ್ತು ಆರೋಪಿಗಳಿಗೆ ರಕ್ಷಣೆ ನೀಡಿದ ಅರುಣ್ ಶೆಟ್ಟಿ ಎಂಬವರನ್ನು ಬಂಧಿಸಿದ್ದು ಇನ್ನಿಬ್ಬರು ಆರೋಪಿಗಳುಬತಲೆ‌ಮರೆಸಿಕೊಂಡಿದ್ದಾರೆ.
ದಿನಾಂಕ: 23-10-2025 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್,ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದು, ಈ ಪೈಕಿ ಕೊಲೆ ಯತ್ನ ಪ್ರಕರಣದಲ್ಲಿ ಬಾಗಿಯಾದ ಆರೋಪಿಗಳಾದ ಸುಶಾಂತ್ @ ಕಡವಿ(29), ಕಟ್ಲ ಮನೆ, ಕಾನಾ, ಸುರತ್ಕಲ್, ಮಂಗಳೂರು
ಕೆ ವಿ ಅಲೆಕ್ಸ್(27), ಬೈಕಲ ಮನೆ, ಕಾನಾ ಕಟ್ಲ, ಇಡ್ಯಾ ಗ್ರಾಮ, ಸುರತ್ಕಲ್, ಮಂಗಳುರು
ನಿತಿನ್(26), ಶಿವಕೃಪಾ ಇಂದಿರಾ ಕಟ್ಟೆ, ಸುರತ್ಕಲ್, ಮಂಗಳೂರು.
ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ವ್ಯಕ್ತಿ
ಆರುಣ್ ಶೆಟ್ಟಿ(56), ವಿದ್ಯಾನಗರ ರಸ್ತೆ, ಕುಳಾಯಿಗುಡ್ಡೆ, ಹೊನ್ನಕಟ್ಟೆ, ಸುರತ್ಕಲ್, ಮಂಗಳೂರು.
ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ರವಿಶಂಕರ್, ಮಾನ್ಯ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ, ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ, ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ರವರು ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ ಎ ಎಫ್ ತಂಡದವರು ಮತ್ತು ಶ್ವಾನ ದಳದವರು ಆರೋಪಿಗಳ ಪತ್ತೆಯ ಬಗ್ಗೆ ಹಾಗೂ ತನಿಖೆಯ ಬಗ್ಗೆ ಭಾಗವಹಿಸಿರುತ್ತಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version