ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡನಿಗೆ ಅ.24 ರಂದು ನೋಟಿಸ್ ಜಾರಿ ಮಾಡಿದ್ದಾರೆ.
ಸೋಮವಾರ ವಿಚಾರಣೆಗೆ ಹಾಜರಾಗದಿದ್ದಲ್ಲಿ BNS 35(3) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು 9 ನಿರ್ದೇಶನ ಪಾಲಿಸುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.
ಸಾಕ್ಷಿ ದೂರು ದಾರನಾಗಿ ಬಂದ ಚಿನ್ನಯ್ಯ ತಂದಿದ್ದ ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಸಿತ್ತು. ಇದೀಗ ಮತ್ತೆ ಹಾಜರಾಗಲು ತಿಳಿಸಿದ್ದಾರೆ.
ಸೋಮವಾರ ಸೌಜನ್ಯ ಪರ ಹೋರಾಟಗಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಇಟ್ಟುಕೊಂಡಿದ್ದು ಇದೇ ದಿನ ಇವರಿಗೆ ಹಾಜರಾಗುವಂತೆ ನೋಟೀಸ್ ನೀಡಿರುವುದು ಕುತೂಹಲ ಕೆರಳಿಸಿದೆ.




