ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ27ರಂದು ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಸೂಚನೆಯನ್ನು ಉಲ್ಲಂಘಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.







