Home ಅಪರಾಧ ಲೋಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ದಾಖಲು

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ದಾಖಲು

8
0

ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದರು. ಈ ಸಂಬಂಧ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ದ ಅ.25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ ಕ್ರಮಾಂಕ 118/2025, 3 (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.25ರಂದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here