ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಮಹೇಶ್ ಶೆಟ್ಟಿ ಹಾಗೂ ಇತರರು ವಕೀಲರ ಮೂಲಕ ಹಾಜರಾತಿಗೆ ಒಂದು ವಾರ ವಿನಾಯಿತಿ ಕೇಳಿದ್ದಾರೆ
ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ ,ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿತ್ತು. ಆದರೆ ಇವರು ಅ27 ರಂದು ಮಧ್ಯಾಹ್ನದ ವರೆಗೂ ವಿಚಾರಣೆಗೆ ಹಾಜರಾಗಿಲ್ಲ.
ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ಈ ನಾಲ್ಕು ಮಂದಿಪರವಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ನ್ಯಾಯವಾದಿ ಅಂಬಿಕಾ ಪ್ರಭು ಈ ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾರಾ ಅಥವಾ ಮುಂದಿನ ಹಂತದಲ್ಲಿ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.
