ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ
ಈತ ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಅ30ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ಬಂಧಿಸಿದ್ದಾರೆ.

 
        


